ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಮಾಜಿ ಪ್ರಧಾನಿ, ಆರ್ಥಿಕ ಚತುರ ಮನಮೋಹನ್‌ ಸಿಂಗ್‌ ಕೊನೆಯುಸಿರೆಳೆದಿದ್ದಾರೆ. ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Farmer PM Manmohan Singh) ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್‌ (Delhi Aims) ಆಸ್ಪತ್ರೆಗೆ ಗುರುವಾರ ರಾತ್ರಿ ಮನಮೋಹನ್‌ ಸಿಂಗ್‌ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಸೇರಿಸುವಾಗಲೇ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ (Government Holiday) ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ (School-College Holiday ಇರಲಿದೆ.

Post a Comment

Previous Post Next Post