ಓದಿನೊಂದಿಗೆ ವಿದ್ಯಾರ್ಥಿ ದಿಸೆಯಲ್ಲೇ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವುದು ಉತ್ತಮ ; ಗ್ರಾಪಂ ಸದಸ್ಯ ಸಂತೋಷ್ ಶಣವಿನಕುಪ್ಪೆ


ಅರಕಲಗೂಡು: ವಿದ್ಯಾರ್ಥಿಗಳು ಪ್ರವಾಸ ಕೈಗೊಳ್ಳುವುದರಿಂದ ಬೌದ್ಧಿಕ ಗುಣಮಟ್ಟ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಸಂತೆಮರೂರು ಗ್ರಾಪಂ ಸದಸ್ಯ ಸಂತೋಷ್ ಶಣವಿನಕುಪ್ಪೆ ನುಡಿದರು.

ತಾಲೂಕಿನ ಶಣವಿನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಓದಿನೊಂದಿಗೆ ವಿದ್ಯಾರ್ಥಿ ದಿಸೆಯಲ್ಲೇ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವುದು ಉತ್ತಮ. ಈ ಸಂದರ್ಭದಲ್ಲಿ ನೋಡಿದ ನೆನಪುಗಳು ಸಹ ಮಕ್ಕಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದುಕೊಳ್ಳಲಿದೆ. ಕಲಿಕೆಗೂ ನೆರವಾಗಲಿದೆ ಎಂದರು.

ಮುಖ್ಯ ಶಿಕ್ಷಕಿ ಎಷಮಿನ್ ತಾಜ್, ಸಹ ಶಿಕ್ಷಕರಾದ ರೌಷನ್ ಅರಾ, ಸಾಗರ್, ಪರಮೇಶ್ ಇದ್ದರು.


Post a Comment

Previous Post Next Post