ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಅರಕಲಗೂಡು : ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ 
 2ನೇ ಹಂತದ ಮುಷ್ಕರ ಇಂದು ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಪುನಿತ್ ಮಾತಾನಾಡಿ,  ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಸ್ವಂತ ಮೊಬೈಲ್‌ನಲ್ಲಿ ವೈಯಕ್ತಿಕ ಡೇಟಾ ಬಳಸಿಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದೆ. ಎಲ್ಲ ವಿಷಯಗಳ ಪ್ರಗತಿಯನ್ನು ಒಂದೇ ಬಾರಿ ಕೇಳುತ್ತಾರೆ. ಇದರಿಂದ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು.ಕೆಲಸ ಮಾಡಲು ಸಿದ್ಧರಿದ್ದೇವೆ. ಆದರೆ, ಸೌಕರ್ಯಗಳ ಜೊತೆಗೆ ಕಾಲಾವಕಾಶ ನೀಡಬೇಕು ಎಂದರು.

ಮುಷ್ಕರದಲ್ಲಿ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.
ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ರೀತಿಯ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.


News5Kannada 
  Ravi Dummi 

Post a Comment

Previous Post Next Post