ಅರ್ಥಪೂರ್ಣ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಆಚರಣೆ

ಅರಕಲಗೂಡು : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಮಡಿವಾಳ ಸಂಘದ ವತಿಯಿಂದ ಶನಿವಾರ ಅರ್ಥಪೂರ್ಣ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಸಮಾರಂಭ ಜರುಗಿತು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ವಿವಿಧ ಕಲಾ ತಂಡಗಳೊಂದಿಗೆ ಮಾಚಿದೇವರ ಉತ್ಸವ ಮೂರ್ತಿಯನ್ನು ಬೆಳ್ಳಿಸಾರೋಟಿನಲ್ಲಿ ಕೂರಿಸಿ ಭವ್ಯ ಮೆರವಣಿಗೆ ಮಾಡಲಾಯಿತು.ಮೆರವಣಿಗೆಯಲ್ಲಿ ತಹಸೀಲ್ದಾರ್ ಮತ್ತು ಮಡಿವಾಳ ಸಮಾಜದ ಮುಖಂಡರು ಭಾಗವಹಿಸಿದ್ದರು.

ಬಳಿಕ ಶಿಕ್ಷಕರ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರದೀಪ್‌ಕುಮಾರ್,ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ ಶಿಗ್ಗಾವಿ,ಜಿಪಂ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ,ಮಾಜಿ ತಾಪಂ ಅಧ್ಯಕ್ಷ ನರಸೇಗೌಡ,ಜೆಡಿಎಸ್ ಅಧ್ಯಕ್ಷ ಹೊನ್ನವಳ್ಳಿ ಸತೀಶ್,ದೊಡ್ಡಮಗ್ಗೆ ರಾಜೇಗೌಡ,ಸಮಾಜದ ಅಧ್ಯಕ್ಷ ಕೇಶವಮೂರ್ತಿ,ಪಪಂ ಮಾಜಿ ಅಧ್ಯಕ್ಷ ಮಂಜುಶೆಟ್ಟಿಗೌಡ,ಜಿಲ್ಲಾ ವೀರಶೈವ ಮಹಾ ಸಭ ಪ್ರಧಾನ ಕಾರ್ಯದರ್ಶಿ ರವಿಕುಮಾರ್,ಮಡಿವಾಳ ಸಮಾಜದ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ,ಕಂದಾಯ ಅಧಿಕಾರಿಗಳಾದ ಸೋಮಶೇಖರ್,ಸ್ವಾಮಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧಿಕಾರಿ ಪುಣ್ಯಾವತಿ ಅವರು ನಿಗಮದಿಂದ ದೊರೆಯುವ ಸವಲತ್ತುಗಳ ಬಗ್ಗೆ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿ ರಘು ಇಲಾಖೆಯಿಂದ ದೊರೆಯುವ ಸೌಕರ್ಯಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಪಡೆದ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನೆಲಸಿರುವ ಮಡಿವಾಳ ಸಮಾಜದ ಮಹಿಳೆಯರು.ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


ಕ್ಯಾಪ್ಸನ್-ಅರಕಲಗೂಡಿನಲ್ಲಿ ಶನಿವಾರ ಮಾಚಿದೇವರ ಉತ್ಸವಮೂರ್ತಿಯನ್ನು ಬೆಳ್ಳಿ ಸಾರೋಟಿನಲ್ಲಿ ಕೂರಿಸಿ ಭವ್ಯ ಮೆರವಣಿಗೆ ಮಾಡಲಾಯಿತು.
ಕ್ಯಾಪ್ಸನ್-ಅರಕಲಗೂಡಿನ ಶಿಕ್ಷಕರ ಭವನದಲ್ಲಿ ಶನಿವಾರ ನಡೆದ ಮಾಚಿದೇವರ ಜಯಂತಿ ಸಮಾರಂಭದಲ್ಲಿ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ವತಿಯಿಂದ ದೊರೆಯುವ ಸವಲತ್ತುಗಳ ಕುರಿತು ಅಧಿಕಾರಿ ಪುಣ್ಯಾವತಿ ಮಾಹಿತಿ ನೀಡಿದರು.

@News5kannada
Ravi Dummi

Post a Comment

Previous Post Next Post