ಅರಕಲಗೂಡು: ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ಪೇಟೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಬುಧವಾರ ಸಂಭ್ರಮದಿಂದ ನೆರವೇರಿತು.
ಅಲಂಕರಿಸಿದ ಎತ್ತಿನ ಗಾಡಿಯೊಂದಿಗೆ ಸೋಮನ ಕುಣಿತ, ವಾದ್ಯವೃಂದ ಮುಂತಾದ ಕಲಾತಂಡಗಳೊಂದಿಗೆ ಮಕ್ಕಳು ಪೂರ್ಣಕುಂಭ ಹೊತ್ತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಮುದಾಯದ ಗಮನ ಸೆಳೆದರು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಥೆ ಹೇಳುವುದು, ಮೋಜಿನ ಗಣಿತ, ಸ್ಮರಣಶಕ್ತಿ ಪರೀಕ್ಷೆ, ಪೋಷಕರು ಮತ್ತು ಮಕ್ಕಳ ನಡುವೆ ಸಂವಾದ ಸೇರಿದಂತೆ ಏಳು ವಿಧದ ಸ್ಫರ್ಧಾಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ 10 ಶಾಲೆಗಳ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ ತಮ್ಮ ಪ್ರತಿಭೆ ಮೆರೆದರು.
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸರಸ್ವತಿ, ಸಂಘಟನಾ ಕಾರ್ಯದರ್ಶಿ ಸದಾಶಿವ, ಖಜಾಂಚಿ ಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮೋಹನ್, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಯೋಗರಾಜ್, ಸಿಆರ್ ಪಿ ಡಿ.ರೂಪ, ಮುಖ್ಯ ಶಿಕ್ಷಕಿ ಲಕ್ಷ್ಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧರ್ಮ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಾಜಶೇಖರ್ ಭಾಗವಹಿಸಿದ್ದರು.
Tags
ಅರಕಲಗೂಡು