ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ - ರೈತ ಆತ್ಮಹತ್ಯೆ

ಅರಕಲಗೂಡು : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ತಾಲ್ಲೂಕಿನ ಕೊಣನೂರು ಹೋಬಳಿ ಕಂಟೇನಹಳ್ಳಿ ಗ್ರಾಮದಲ್ಲಿ ಘಟನೆ

ರೈತ ಕೆ.ಡಿ. ರವಿ (50) ಮೃತ

ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಲ್ಲಿ ಒಟ್ಟು 9 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು.

ಸಾಲ ಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ. 

ರಾಜಸ್ವ ನಿರೀಕ್ಷಕ ಕುಮಾರ, ಗ್ರಾಮ ಲೆಕ್ಕಿಗ ಮದನ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪತ್ನಿ ಇದ್ದಾರೆ.

ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 



Post a Comment

Previous Post Next Post