ಅರಕಲಗೂಡು : ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿನ ವಸ್ತುಗಳೆಲ್ಲ ಛಿದ್ರವಾದ ಘಟನೆ, ಪಟ್ಟಣದ ತಾಲ್ಲೂಕು ಕಚೇರಿ ಹಿಂಭಾಗದ ವಿನಾಯಕ ನಗರದಲ್ಲಿ ನಡೆದಿದೆ.
ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇರದ ವೇಳೆ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಮನೆಯ ವಸ್ತುಗಳೆಲ್ಲ ಛಿದ್ರವಾಗಿವೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸ್ಫೋಟದ ಪರಿಣಾಮ ಅಡುಗೆ ಮನೆ ಇತರೆ ವಸ್ತುಗಳು ಸುಟ್ಟು ಕರಕಲಾಗಿದೆ.
Ravi Dummi
Tags
ಅರಕಲಗೂಡು