ವಿಜೃಂಭಣೆಯ ಚಿಕ್ಕಬೊಮ್ಮನಹಳ್ಳಿ ಶ್ರೀ ರಂಗನಾಥಸ್ವಾಮಿ ರಥೋತ್ಸವ

ಅರಕಲಗೂಡು : ತಾಲ್ಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ರಂಗನಾಥಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಇಂದು ಸಂಜೆ ವಿಜಂಭಣೆಯಿಂದ ನೆರವೇರಿತು.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಶುಕ್ರವಾರ ಸಂಜೆಯಿಂದಲೇ ಧ್ವಜ ಪೂಜೆ ಮುಂತಾದ ಪೂಜಾ ಕೈಂಕರ್ಯಗಳು ನಡೆದವು. ಸುತ್ತಮುತ್ತಲ ಹತ್ತಾರು ಹಳ್ಳಿಗಳಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ರಂಗನಾಥಸ್ವಾಮಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು.

ಸಂಜೆ ನಾನಾ ಬಗೆಯ ಹೂವುಗಳಿಂದ ಹಾಗೂ ಬಗೆ ಬಗೆಯ ಬಣ್ಣದ ವಸ್ತ್ರಗಳಿಂದ ಶೃಂಗರಿಸಿದ್ದ ರಥದಲ್ಲಿ ರಂಗನಾಥಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸ್ವಾಮೀಜಿಗಳು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಭಕ್ತರು ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದು ಹಣ್ಣು , ಧವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.
ಶ್ರೀ ಶಂಭುನಾಥ ಸ್ವಾಮೀಜಿ, ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಹೊಡೆನೂರು ಮಹೇಶ್
ಮಠದ ಭಕ್ತರು ಹಾಗೂ ಅಪಾರ ಸಂಖ್ಯೆಯ ಜನರು ಹಾಜರಿದ್ದರು.

                               News5kannada
                                  Ravi Dummi

Post a Comment

Previous Post Next Post