ಏಪ್ರಿಲ್14ಕ್ಕೆ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ - ಶಾಸಕ ಎ.ಮಂಜು

ಅರಕಲಗೂಡು : ತಾಲೂಕು ಆಡಳಿತ ವತಿಯಿಂದ ಏಪ್ರಿಲ್-14ರಂದು ಅದ್ಧೂರಿಯಾಗಿ ನಡೆಯುವ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಎಲ್ಲಾ ಪ್ರಗತಿ ಪರ ಸಂಘ ಸಂಸ್ಥೆಗಳ ಕಾರ್ಯಕರ್ತರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶಾಸಕ ಎ.ಮಂಜು ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,ಈ ಬಾರಿ ಯಾವುದೇ ಚುನಾವಣೆ ಇಲ್ಲದೇ ಇರುವುದರಿಂದ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡುವುದು ನಮ್ಮ ಭಾಗ್ಯವಾಗಿದೆ.ಪಟ್ಟಣ ಸೇರಿದಂತೆ ಇಡೀ ತಾಲೂಕಿನಾದ್ಯಂತ ಜನರು ಸಂಭ್ರಮದಿAದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನಶಿಲ್ಪಿಗೆ ಗೌರವ ತಂದುಕೊಡಬೇಕೆAದು ಕರೆನೀಡಿದರು.

ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಯ ಗೋಪುರ ಕಾರ್ಯಕ್ರಮ ಈಗಾಗಲೇ ಪೂರ್ಣಗೊಳ್ಳಬೇಕಿತ್ತು.ಕೆಲಸ ನಿರ್ವಹಿಸುವ ತಂಡ ಸುಳ್ಳು ನೆಪಹೇಳಿ ಬೇರೆ ಕಡೆ ತೆರಳಿರುವ ಪರಿಣಾಮ ಅಂದುಕೊAಡ ವೇಳೆಗೆ ಗೋಪುರ ಕೆಲಸ ಮುಗಿದಿಲ್ಲ.ಈ ಬಾರಿಯ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಗೋಪುರ ಸಮರ್ಪಣೆ ಮಾಡುವ ಮೂಲಕ ಐತಿಹಾಸಿಕ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶವನ್ನು ಹೊಂದಲಾಗಿತ್ತು.ಕೆಲಸಗಾರರಿAದ ಅದು ಸಾಧ್ಯವಾಗಿಲ್ಲ.ಏಪ್ರಿಲ್ 14ರ ಜಯಂತಿ ಕಾರ್ಯಕ್ರಮ ಮುಗಿದ ನಂತರ ಗೋಪುರ ಉದ್ಘಾಟನೆ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ರೀತಿಯ ವೈಭವದಿಂದ ಕಾರ್ಯಕ್ರಮ ಆಯೋಜನೆ ಮಾಡೋಣ ಎಂದು ಹೇಳಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ.ಪಟ್ಟಣ ಪಂಚಾಯಿತಿ ಎಲ್ಲಾ ಸದಸ್ಯರು,ತಾಲೂಕಿನ ಎಲ್ಲಾ ಗ್ರಾಪಂಗಳ ಸದಸ್ಯರು,ಅಧಿಕಾರಿಗಳು,ಸಿಬ್ಬಂದಿಗಳು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ,ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು.ಯಾರು ಗೈರಾಗುತ್ತಾರೋ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು.ಈಗಾಗಲೇ ಎಲ್ಲರಿಗೂ ಮಾಹಿತಿ ನೀಡುವಂತೆ ತಹಸೀಲ್ದಾರ್,ಇಒ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಡೀ ದೇಶಕ್ಕೆ ಸಂವಿಧಾನ ನೀಡಿ ಪ್ರಜಾಪ್ರಭುತ್ವದ ಆಶಯಗಳನ್ನು ಪ್ರತಿಯೊಬ್ಬರಿಗೂ ಕಲ್ಪಿಸಿರುವ ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು.ಎಲ್ಲಾ ಸಮಾಜದವರು,ಅಭಿಮಾನಿಗಳು,ವಿದ್ಯಾರ್ಥಿಗಳು,ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು,ಆಶಾ ವರ್ಕರ್‌ಗಳು,ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಿದೆ.ಈ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಮಂಜು ಅವರು ತಿಳಿಸಿದರು.

ತಹಸೀಲ್ದಾರ್ ಸೌಮ್ಯ ಅವರು ಮಾತನಾಡಿ,ಏಪ್ರಿಲ್-14ರಂದು ಬೆಳಿಗ್ಗೆ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಬೆಳ್ಳಿರಥದ ಸಾರೋಟಿನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ವಿವಿಧ ಕಲಾತಂಡಗಳು,ಅಧಿಕಾರಿಗಳೊAದಿಗೆ ನಡೆಯಲಿದೆ.ಇದಾದ ಬಳಿಕ ಶಿಕ್ಷಕರ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಅವತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಪಾರದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಲಿತ ಸಮುದಾಯದ ಗಣ್ಯರಿಗೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.ವಿಶೇಷಭಾಷಣದ ವ್ಯವಸ್ಥೆಯನ್ನು ಸಂಪನ್ಮೂಲ ವ್ಯಕ್ತಿಯಿಂದ ನಡೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮ ಆಯೋಜನೆ ಕುರಿತು ಕೆಲವು ಸಲಹೆಗಳನ್ನು ನೀಡಿದರು.ಪಪಂ ಅಧ್ಯಕ್ಷ ಪ್ರದೀಪ್ ಕುಮಾರ್,ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್,ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.


.                            ಫೋಟೋ -ಕ್ಯಾಪ್ಸನ್-
ಅರಕಲಗೂಡು ಪಟ್ಟಣದ ತಾಪಂ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿ ಸಭೆ ಶಾಸಕ ಎ.ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

                         ಫೋಟೋ-ಕ್ಯಾಪ್ಸನ್-
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು,ದಲಿತ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.

                           News5Kannada
                               Ravi Dummi

Post a Comment

Previous Post Next Post