ಹೊಳೆನರಸೀಪುರ :ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಹೊಳೆನರಸೀಪುರ ತಾಲ್ಲೂಕಿನ ಹುಚ್ಚನಕೊಪ್ಪಲು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾರಿ ಹೋಗಿ ಅಪಾರ ಹಾನಿಯಾಗಿದೆ.
ಕೇಶವ ಶಿವಮ್ಮ ಎಂಬುವವರ ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದರಿಂದ ಮನೆಯಲ್ಲಿದ್ದ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ದವಸ ಧಾನ್ಯಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಮನೆಯ ಸದಸ್ಯರು ಅಳಲು ತೋಡಿಕೊಂಡಿದ್ದಾರೆ.
ಸರ್ಕಾರ ಪರಿಹಾರವನ್ನು ಒದಗಿಸಬೇಕು ಮನವಿ ಮಾಡಿಕೊಂಡಿದ್ದಾರೆ.
News5Kannada
Ravi Dummi
Tags
ಹೊಳೆನರಸೀಪುರ