ಅರಕಲಗೂಡು : ಮಾಜಿ ಶಾಸಕ, ಭ್ರಷ್ಟಾಚಾರದ ವಿರುದ್ಧದ ಹೋರಾಟದಿಂದ ಸದ್ದು ಮಾಡುವ ಎ.ಟಿ.ರಾಮಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೆಡಿಎಸ್ ನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ ಎಂದು ಆರೋಪಿಸಿ ಜೆಡಿಎಸ್ ತೊರೆದಿದ್ದ ಅವರು ಕೇಂದ್ರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ಅಲ್ಲಿ ಅವರಿಗೆ ಉತ್ತಮ ರಾಜಕೀಯ ಅವಕಾಶಗಳನ್ನು ನಿರೀಕ್ಷಿಸಲಾಗಿತ್ತು.
ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಅವರಿಗೆ ರಾಜಕೀಯವಾಗಿ ಹಿನ್ನಡೆಯಾಗಿತ್ತು. ಬಿಜೆಪಿ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಅವರು ಈಗ ಸದಸ್ಯತ್ವಕ್ಕೂ ಗುಡ್ ಬೈ ಹೇಳಿದ್ದಾರೆ.
News5Kannada
Ravi Dummi
Tags
ಅರಕಲಗೂಡು