ಹಣ, ಆಸ್ತಿಗಿಂತ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ - ಶಾಸಕ ಎ. ಮಂಜು

ಅರಕಲಗೂಡು: ವಿದ್ಯಾರ್ಥಿಗಳು ಉತ್ತಮ ನಡವಳಿಕೆ, ಶಿಸ್ತು ಮೈಗೂಡಿಸಿಕೊಂಡು ಕಲಿಕೆ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು.

 ಪಟ್ಟಣದ ಬಿಇಒ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಂಕ ಗಳಿಸುವಲ್ಲಿ ಪೈಪೋಟಿಗೆ ಬಿದ್ದಿರುವುದು ಮುಂದಿನ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಯಾಗುತ್ತದೆ. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಸತ್ಪ್ರಜೆ ಯಾಗಲು ಸಾಧ್ಯ. ಪಾಲಕರು ಹಣ ಆಸ್ತಿ ಗಳಿಕೆಗಿಂತಲೂ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೆ ಅಂತಹ
ಕುಟುಂಬಗಳು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು ಎಂದರು. ಶಾಲೆಗೆ ಬರುವ ವಿದ್ಯಾರ್ಥಿ ಗಳು ತರಗತಿಗೆ ಗೈರಾಗದಂತೆ ನೋಡಿಕೊಳ್ಳಬೇಕು, ಅರ್ಧ ದಲ್ಲೇ ಶಾಲೆ ಬಿಡುವ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಿ ಶಾಲೆ ಬಿಡದಂತೆ ನೋಡಿಕೊಳ್ಳಬೇಕು. 

ಶೈಕ್ಷಣಿಕವಾಗಿ ಅರಕಲಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎ. ಮಂಜು, ಕೆ.ಪಿ. ನಾರಾಯಣ್, ರಂಗಸ್ವಾಮಿ ಇತರರಿದ್ದರು. ಮಕ್ಕಳಿಗೆ ಸರ್ಕಾರ ನೀಡುತ್ತಿರುವ ಎಲ್ಲ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಿ ಗುಣಮಟ್ಟದ ಶಿಕ್ಷಣ ಕೊಡಬೇಕು ಎಂದು ಹೇಳಿದರು.

 ಬಿಇಒ ಕೆ.ಪಿ. ನಾರಾಯಣ್‌, ಅಕ್ಷರ ದಾಸೋಹ ಅಧಿಕಾರಿ ರಂಗಸ್ವಾಮಿ, ದೈಹಿಕ ಶಿಕ್ಷಣ ನಿರ್ದೇಶಕ ನಿಂಗರಾಜು ಇತರರಿದ್ದರು.

News5kannada

Post a Comment

Previous Post Next Post