ಭೂ ಮಾಪಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಹೋರಾಟ
ಮುಷ್ಕರ ನಿರತರಿಂದ ಮನವಿ ಸ್ವೀಕರಿಸಿದ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ವಿ. ಯೋಗಣ್ಣ ಹೇಳಿಕೆ
ಅರಕಲಗೂಡು: ಸೇವಾ ಭದ್ರತೆ, ಕನಿಷ್ಠ ವೇತನವೂ ಇಲ್ಲದೆ ದುಡಿಯುತ್ತಿರುವ ಭೂ ಮಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರ್ಕಾದ ವಿರುದ್ದ ಹೋರಾಟ ತೀವ್ರಗೊಳಿಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ವಿ. ಯೋಗಣ್ಣ ತಿಳಿಸಿದರು.
ಪಟ್ಟಣದಲ್ಲಿ ಭೂ ಮಾಪಕರ ಮುಷ್ಕರ ಬೆಂಬಲಿಸುವಂತೆ ಮುಷ್ಕರ ನಿರತರಿಂದ ಸೋಮವಾರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಸೇವೆ ಕಾಯಂಗೊಳಿಸುವAತೆ ಸರ್ಕಾರಿ ಭೂ ಮಾಪಕರ ಕಚೇರಿ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ.
ಮುಷ್ಕರ ನಿರತರು ಕೆಲಸ ಸ್ಥಗಿತಗೊಳಿಸಿರುವ್ಯದರಿಂದ ರೈತರ ಕೆಲಸಗಳಿಗೆ ತೊಂದರೆಯಾಗಿದೆ. ತಕರಾರು, ಕೋರ್ಟ್ ಆದೇಶ ಪ್ರಕರಣ, ಪೋಡಿಮುಕ್ತ, ಆಕಾರಬಂದ್, ಡಿಜಿಟೈಜೇಶನ್, ದರ್ಖಾಸ್ತು ಪೋಡಿ, ಸ್ವಮಿತ್ತ ಮತ್ತಿತರ ಪ್ರಕರಣಗಳನ್ನು ನಿರ್ವಹಿಸುತ್ತಿರುವ ಭೂ ಮಾಪಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಇಲ್ಲವಾದರೆ ರೈತ ಸಂಘ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಗುವುದು ಎಂದು ಎಚ್ಚರಿಸಿದರು.
Tags
ಅರಕಲಗೂಡು