ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ದೂರು: ರೈತನ ಮೇಲೆ ಗ್ರಾ.ಪಂ. ಸದಸ್ಯನಿಂದ ಹಲ್ಲೆ

ಅರಕಲಗೂಡು : ತಾಲೂಕಿನ ಕಾಳೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ರೈತರೊಬ್ಬರ ಮೇಲೆ ಗ್ರಾ.ಪಂ. ಸದಸ್ಯ ಹಾಗೂ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಕಾಳೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ರವಿ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯಡಿ (RTI) ಮಾಹಿತಿ ಪಡೆದಿದ್ದರು. ಈ ಮಾಹಿತಿಯ ಆಧಾರದ ಮೇಲೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ರವಿ ಅವರ ದೂರನ್ನು ಪರಿಗಣಿಸಿದ ಲೋಕಾಯುಕ್ತರು ಇತ್ತೀಚೆಗಷ್ಟೇ ಪಂಚಾಯತಿಯ ಅವ್ಯವಹಾರಗಳ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಈ ಬೆಳವಣಿಗೆಯಿಂದ ಕುಪಿತಗೊಂಡ ಪಂಚಾಯತಿ ಸದಸ್ಯ ಆನಂದ್ ಹಾಗೂ ವಿಶ್ವ ಎಂಬುವವರು ರವಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ರೈತ ರವಿ ಅವರ ಮೇಲೆ ನಡೆದಿರುವ ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Post a Comment

Previous Post Next Post