ಅರಕಲಗೂಡು : ತಾಲ್ಲೂಕಿನ ಸಂತೆಮರೂರು ಗ್ರಾಮದಲ್ಲಿ ರೂ. 75 ಲಕ್ಷ ವೆಚ್ಚದಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇಂದು ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತಾನಾಡಿದ ಅವರು , ಆರು ತಿಂಗಳ ಒಳಗಾಗಿ ಅಂಬೇಡ್ಕರ್ ಭವನ ಪೂರ್ಣಗೊಳಿಸಿ, ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಅಂಬೇಡ್ಕರ್ ಭವನದ ಅಡುಗೆ ಮನೆ ನಿರ್ಮಾಣಕ್ಕಾಗಿ ಇನ್ನು ಹೆಚ್ಚಿನ ಅನುದಾನ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮದ ಎಲ್ಲಾ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.
Tags
ಅರಕಲಗೂಡು