ಹೊಳೆನರಸೀಪುರ: ಖಾಸಗಿ ಶಾಲೆಗೆ ಮಕ್ಕಳನ್ನು ಕರೆ ದೊಯ್ಯುತ್ತಿದ್ದ ಬಸ್ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೂದಲೆಳೆ ಅಂತರದಲ್ಲಿ ಬಸ್ ಕೆರೆಗೆ ಬೀಳುವುದು ತಪ್ಪಿದ್ದು, ಬಸ್‌ನಲ್ಲಿದ್ದ 40 ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾಗಿರುವ ಬಸ್ ಶ್ರೀಸಿದ್ದರಾಮೇಶ್ವರ ಶಾಲೆಗೆ ಸೇರಿದ್ದಾಗಿದ್ದು, ಸೋಮವಾರ ಬೆಳಿಗ್ಗೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವ ವೇಳೆ ಅವಘಡ ನಡೆದಿದೆ.
ಮರಕ್ಕೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್‌ನಿಂದ ವಿದ್ಯಾರ್ಥಿಗಳು ಕೆಳಗಿಳಿದ ಪರಿಣಾಮ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳದಲ್ಲಿ ವಿದ್ಯಾರ್ಥಿಗಳ ಪೋಷಕರು ಜಮಾಯಿಸಿದ್ದು, ಘಟನೆ ಬಳಿಕ ಸ್ಕೂಲ್ ಬಸ್‌ಗೆ ಎಫ್‌ಸಿ ಹಾಗು ಇನ್ಸೂರೆನ್ಸ್ ಇಲ್ಲದಿರು ವುದು ಬೆಳಕಿಗೆ ಬಂದಿದೆ. ಹಳ್ಳಿಮೈಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Tags
ಹೊಳೆನರಸೀಪುರ